Wednesday, June 3, 2026
Homeತಾಜಾ ಸುದ್ದಿವೇದಿಕೆ ಮೇಲೆಯೇ ಕುಸಿದು ಬಿದ್ದ ಖ್ಯಾತ ತಮಿಳು ನಟ; ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋ ವೈರಲ್

ವೇದಿಕೆ ಮೇಲೆಯೇ ಕುಸಿದು ಬಿದ್ದ ಖ್ಯಾತ ತಮಿಳು ನಟ; ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋ ವೈರಲ್

- Advertisement -
- Advertisement -

ತಮಿಳುನಾಡು: ಖ್ಯಾತ ತಮಿಳು ನಟ ವಿಶಾಲ್‌ ಅವರು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದ ಫೋಟೋಗಳು ಹಾಗೂ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿವೆ.

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಕೂವಾಗಮ್‌ನಲ್ಲಿರುವ ಕೂತಾಂಡವರ್‌ ದೇವಸ್ಥಾನದಲ್ಲಿ ಭಾನುವಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಶಾಲ್‌, ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇನ್ನು ನಟ ಪ್ರಜ್ಞೆ ತಪ್ಪಿ ಬಿದ್ದಿದ್ದ ವಿಡಿಯೋಗಳನ್ನು ನೋಡಿದ ಅಭಿಮಾನಿಗಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಈ ಮೊದಲು ವೇದಿಕೆ ಮೇಲೆ ಮಾತನಾಡುವಾಗ ಅವರು ಸಾಕಷ್ಟು ನಡುಗುತ್ತಿದ್ದರು. ಈ ಬೆನ್ನಲ್ಲೇ ವಿಶಾಲ್‌ ಈಗ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಈ ವೇಳೆ ಅಲ್ಲೇ ಇದ್ದ ಮಾಜಿ ಸಚಿವ ಪೊನ್ನುಡಿ ಅವರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು, ವಿಶಾಲ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!