Saturday, October 17, 2026
Homeಕರಾವಳಿಮಂಗಳೂರುಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಕ್ಕೆ ಭಾರೀ ವಿರೋಧ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಕ್ಕೆ ಭಾರೀ ವಿರೋಧ

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದೀಗ ವಿವಾದಕ್ಕೆ ಕಾರಣವಾಗಿದೆ.


ಗ್ರಾಪಂ ಸದಸ್ಯ ಆಗಿರುವ ಹರೀಶ್ ಇಂಜಾಡಿ ಅವರು ಈ ಹಿಂದೆ ದೇವಸ್ಥಾನದ ಆಡಳಿತ ಮಂಡಳಿಗೆ ವಂಚಿಸಿ ಜೈಲು ಸೇರಿದ್ದರು. ಅವರಿಗೆ  ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸು ಮಾಡಿದ್ದರು ಎಂದು ಹೇಳಲಾಗಿದೆ. ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚನೆ ಮಾಡಿದ್ದ ಆರೋಪವನ್ನು ಹರೀಶ್ ಇಂಜಾಡಿ ಎದುರಿಸುತ್ತಿದ್ದಾರೆ.

. ಹರೀಶ್‌ಗೆ ಸದಸ್ಯ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಧಾರ್ಮಿಕದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸ್ಥಳೀಯರು ಪತ್ರ ಬರೆದಿದ್ದರು. ರೌಡಿಶೀಟರ್ ಆಗಿದ್ದ ಹರೀಶ್ ಇಂಜಾಡಿಯನ್ನು ಅಧ್ಯಕರನ್ನಾಗಿ ಮಾಡಬೇಡಿ ಅಂತಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಣೆ ಆರೋಪ ಇವರ ಮೇಲಿದೆ ಎಂದಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷಗಾದಿಗೆ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಎಂದಿದ್ದ ಕಾಂಗ್ರೆಸ್ ಅವರ ಮನೆಗೆ ಭೇಟಿ ನೀಡಿರಲಿಲ್ಲ. ಇದೀಗ ದಿನೇಶ್ ಗುಂಡೂರಾವ್ ಅವರ ಶಿಫಾರಸಿನಂತೆ ಮಾಜಿ ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement -

Latest News

error: Content is protected !!