Friday, June 5, 2026
Homeತಾಜಾ ಸುದ್ದಿಸುಳ್ಯದಲ್ಲಿ ನಡೆದ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ  ಬಿಜೆಪಿ ಮುಖಂಡರು

ಸುಳ್ಯದಲ್ಲಿ ನಡೆದ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ  ಬಿಜೆಪಿ ಮುಖಂಡರು

- Advertisement -
- Advertisement -

ಸುಳ್ಯದಲ್ಲಿ ನಡೆದ ಕೊರಗಜ್ಜನ ಕೋಲದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ  ಇತರೆ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ.

ಸುಳ್ಯದ ಜಯನಗರದ  ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ನಡೆದಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಸಹಿತ ಗಣ್ಯರು ಆಗಮಿಸಿ  ಪ್ರಸಾದ ಸ್ವೀಕರಿಸಿದ್ದಾರೆ.

ರಾಜ್ಯಾಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಸುಳ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗಮಿಸಿದ್ದಾರೆ.  ನರೇಂದ್ರ ಮೋದಿಯವರು 3  ನೇ ಬಾರಿ ಪ್ರಧಾನಿಗಳಾಗಿ ಸರಕಾರ ನಡೆಸಬೇಕೆಂದು ಭಾರತೀಯ ಜನತಾ ಪಾರ್ಟಿ ಜಯನಗರ ಬೂತ್ ಸಮಿತಿಯವರು ಸಾನಿಧ್ಯದಲ್ಲಿ ಸಂಕಲ್ಪ ಮಾಡಿಕೊಂಡ ವಿಶೇಷ ಹರಕೆ ಇದಾಗಿತ್ತು. ಸಂಸದ ಕ್ಯಾ.ಬ್ರಿಜೇಶ್ ಚೌಟರ ಮೂಲಕ ಪ್ರಧಾನಿಯವರಿಗೆ ಕರಿಗಂಧ ಪ್ರಸಾದ ತಲುಪಿಸಲಿದ್ದಾರೆ. ಈ ಸಂದರ್ಭದಲ್ಲಿ  ಸಂಸದರು,  ಸುಳ್ಯ ಶಾಸಕಿ  ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕಿಶೋರ್ ಕುಮಾರ್ ಬೊಟ್ಯಾಡಿ,  ಮಾಜಿ ಸಚಿವ ಎಸ್.ಅಂಗಾರ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿದ್ದು  ಪ್ರಸಾದ ಸ್ವೀಕರಿಸಿದರು.

ದೈವಸ್ಥಾನದ ಪ್ರಮುಖರಾದ ಕೇಶವ ಮಾಸ್ತರ್ ಹೊಸಗದ್ದೆ, ಜಿ.ಜಗನ್ನಾಥ ಜಯನಗರ, ನಗರ ಬಿಜೆಪಿ ಅಧ್ಯಕ್ಷ ಎ.ಟಿ. ಕುಸುಮಾಧರ, ಬೂತ್ ಸಮಿತಿಯವರಿದ್ದು ಅತಿಥಿಗಳನ್ನು ಬರಮಾಡಿಕೊಂಡರು.

- Advertisement -

Latest News

error: Content is protected !!