Monday, June 8, 2026
Homeಕರಾವಳಿಮಂಗಳೂರುಮಂಗಳೂರು: ಪಾದಚಾರಿಗೆ ಪಿಕ್ಆಪ್ ಢಿಕ್ಕಿ, ವ್ಯಕ್ತಿ ಸಾವು

ಮಂಗಳೂರು: ಪಾದಚಾರಿಗೆ ಪಿಕ್ಆಪ್ ಢಿಕ್ಕಿ, ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು: ಪಾದಚಾರಿಗೆ ಪಿಕ್ಆಪ್ ಢಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಬ್ಬಕ್ಕ ಸರ್ಕಲ್ ಸಮೀಪ ನಡೆದಿದೆ. ರಮೇಶ್ (50) ಮೃತ ವ್ಯಕ್ತಿ.

ರಮೇಶ್ ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಉಳ್ಳಾಲ ಕಡೆ ಹೋಗುತ್ತಿದ್ದ ಪಿಕ್ ಅಪ್ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಸಂಚಾರಿ ವಿಭಾಗದ ಡಿಸಿಪಿ ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!