Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡು; ಕೆರೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಕಾಸರಗೋಡು; ಕೆರೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

- Advertisement -
- Advertisement -

ಕಾಸರಗೋಡು; ಕೆರೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಇಂದು ಸಂಜೆ ನಡೆದಿದೆ.


ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಮೃತರು. ಈ ಘಟನೆಯಲ್ಲಿ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಾಣಿಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ನಾಗರಿಕರು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಮಕ್ಕಳನ್ನು ಹೊರ ತೆಗೆದರೂ ಇಬ್ಬರು ಮೃತಪಟ್ಟಿದ್ದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

- Advertisement -

Latest News

error: Content is protected !!