Wednesday, June 3, 2026
Homeಕರಾವಳಿದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾ...

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಮಳೆಯಿಂದಾಗುವ ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಜಿಲ್ಲಾಡಳಿತಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದು, ಅಧಿಕಾರಿಗಳು ತಾಲೂಕು ಕೇಂದ್ರ ಸ್ಥಳಗಳಲ್ಲಿದ್ದು ಸಕ್ರೀಯವಾಗಿ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ಮಂಗಳೂರು ನಗರದಲ್ಲಿ ಮನೆಗಳಲ್ಲಿ ನೀರು ನುಗ್ಗುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲು ಸೂಚಿಸಿದ ಸಚಿವರು, ಅಪಾಯದ ಪ್ರದೇಶದಲ್ಲಿರುವ ಮನೆಗಳಿಂದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳಿಸಲು ತಿಳಿಸಿದ್ದಾರೆ.

ಸುರಕ್ಷಿತವಲ್ಲದ ಅಂಗನವಾಡಿ ಶಾಲಾ ಕಟ್ಟಡದ ಕುರಿತು ಎಚ್ಚರ ವಹಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳು ನಡೆಯುವ ಪ್ರದೇಶದಲ್ಲಿ ಮಳೆ ನೀರು ತಗ್ಗಿನಲ್ಲಿರುವ ವಸತಿ ಪ್ರದೇಶಕ್ಕೆ ಹರಿದು ಬರುತ್ತಿರುವುದನ್ನು ತಕ್ಷಣ ಇದನ್ನು ಸರಿಪಡಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಅಲ್ಲದೇ ಆವರಣವಿಲ್ಲದ ಕೆಂಪು ಕಲ್ಲಿನ ಕೋರೆ, ಕೆರೆಗಳು, ಹಾಗೂ ನದಿಯಲ್ಲಿ ಯಾರು ಈಜಲು ತೆರಳದಂತೆ ಎಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ನಿರ್ದೇಶಿಸಿರುವ ಜಿಲ್ಲಾ ಉಸ್ತುವಾರಿ ಸಚಿವರು, ಮಂಗಳೂರು ಹೊರ ವಲಯದ ವಾಮಂಜೂರು ಸಮೀಪ ಕೆತ್ತಿಕಲ್ ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಈ ಬಾರಿ ಹೆಚ್ಚಿನ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

- Advertisement -

Latest News

error: Content is protected !!