ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ಡಾ. ಅರುಣ್. ಕೆ ಅಧಿಕಾರಿ ವಹಿಸಿಕೊಂಡಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸರ್ಕಾರ ಹಾಗೂ ಪ್ರಧಾನ ಕಚೇರಿಯ ಆದೇಶದಂತೆ ಈ ದಿನ ದಿನಾಂಕ 30-05-2025 ರಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿಗೆ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ತಿಳಿಸಿದರು.