Thursday, June 4, 2026
Homeಕರಾವಳಿಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಪ್ರಕರಣ ದಾಖಲು

ಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು; ಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ.

ದಿನಾಂಕ 30.05.2025 ರಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವೇಣೂರು ಪೊಲೀಸ್ ಠಾಣೆಯಲ್ಲಿ 02 ಪ್ರಕರಣಗಳು ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ದಾಖಲಾಗಿದೆ.

ಮುಂದಿನ ದಿನಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆಯಾಗುವಂತಹ ಸಂದೇಶಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!