Wednesday, June 3, 2026
Homeಕರಾವಳಿಮಂಗಳೂರುಬಂಟ್ವಾಳ; ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಾಕಿದ ಪ್ರಕರಣ; ಯತೀಶ್...

ಬಂಟ್ವಾಳ; ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಾಕಿದ ಪ್ರಕರಣ; ಯತೀಶ್ ಪೆರುವಾಯಿ ಎಂಬಾತನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ;  ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಯತೀಶ್ ಪೆರುವಾಯಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಪೆರುವಾಯಿ ಗ್ರಾಮದ  ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ೦3 ಪೋಸ್ಟ್ ಗಳನ್ನು ಹಾಕಿದ್ದ. ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!