Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ; ರಿಕ್ಷಾ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿ ಚಾಲಕ ಸಾವು

ಬೆಳ್ತಂಗಡಿ; ರಿಕ್ಷಾ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿ ಚಾಲಕ ಸಾವು

- Advertisement -
- Advertisement -

ಬೆಳ್ತಂಗಡಿ; ರಿಕ್ಷಾ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ.


ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ವ್ಯಕ್ತಿ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಿಗ್ಗೆ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ವೇಳೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಓಡಿಸುತ್ತಿರುವಾಗಲೇ ಸಾವನ್ನಪ್ಪಿದ್ದಾರೆ.

ಕೂಡಲೇ ಗಮನಿಸಿದ ಸ್ಥಳೀಯರು ಶರತ್‌ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ, ಅದಾಗಲೇ ಅವರು ನಿಧನ ಹೊಂದಿದ್ದರು. ಕುಟುಂಬದ ಏಕೈಕ ಆಧಾರಸ್ತಂಭವಾಗಿದ್ದ ಶರತ್ ಕುಮಾರ್ ಅವರು ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!