Friday, June 5, 2026
Homeಕರಾವಳಿಮಂಗಳೂರುಮಂಗಳೂರು: ಕಣಚೂರು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಹುಸಿ ಬಾಂಬ್ ಕರೆ

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಹುಸಿ ಬಾಂಬ್ ಕರೆ

- Advertisement -
- Advertisement -

ಮಂಗಳೂರು: ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಹುಸಿ ಬಾಂಬ್ ಕರೆ ಬಂದಿದ್ದ ಘಟನೆ ವರದಿಯಾಗಿದೆ.‌

ಇಂದು ಬೆಳಿಗ್ಗೆ 8.15 ಗಂಟೆಯ ವೇಳೆಗೆ ಆಸ್ಪತ್ರೆಯ ಪ್ರಸವ ಕೊಠಡಿಗೆ ದೂರವಾಣಿ ಕರೆ ಬಂದಿದ್ದು, 11 ಗಂಟೆಗೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.

ಕೂಡಲೇ ಆಸ್ಪತ್ರೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ಸಂಪೂರ್ಣ ಆಸ್ಪತ್ರೆ ಹಾಗೂ ಕಾಲೇಜು ಪರಿಶೀಲನೆ ನಡೆದಿದೆ.

ತಪಾಸಣೆ ವೇಳೆ ಹುಸಿ ಬಾಂಬ್ ಕರೆ ಎಂಬುದು ಖಾತ್ರಿಯಾಗಿದ್ದು, ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!