Wednesday, June 3, 2026
Homeತಾಜಾ ಸುದ್ದಿಆರ್ ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸಸ್ಪೆಂಡ್;...

ಆರ್ ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸಸ್ಪೆಂಡ್; ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ

- Advertisement -
- Advertisement -

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಕಾಲ್ತುಳಿತಕ್ಕೆ ಹನ್ನೊಂದು ಜನ ಆರ್ ಸಿಬಿ ಅಭಿಮಾನಿಗಳು ಬಲಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ತಲೆದಂಡ ಮಾಡಿದೆ.

ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್, ಬೆಂಗಳೂರು ಸೆಂಟ್ರಲ್ ಡಿಸಿಪಿ, ಎಸಿಪಿ, ಸ್ಟೇಡಿಯಂ ಇನ್ ಚಾರ್ಜ್ ಎಸಿಪಿ, ಕಬ್ಬನ್ ಪಾರ್ಕ್ ಠಾಣೆ ಇನ್ಸ್ ಪೆಕ್ಟರ್ ಮತ್ತು ಠಾಣೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಇನ್ನು ಪ್ರಕರಣದ‌ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ರಚಿಸಿದೆ.

ಇದೇ ವೇಳೆ, ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಇಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಇದಲ್ಲದೇ ಎಫ್ಐಆರ್ ನಲ್ಲಿ ದಾಖಲಾಗಿರುವ ಎ1 ಆರ್ ಸಿಬಿ, ಈವೆಂಟ್ ಮ್ಯಾನೇಜರ್ ಎ2 ಡಿಎನ್ ಎ ಮತ್ತು ಎ3 ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಪ್ರತಿನಿಧಿಗಳನ್ನು ಅರೆಸ್ಟ್ ಮಾಡುವಂತೆಯೂ ರಾಜ್ಯ ಸರ್ಕಾರ ಸೂಚನೆ ನೀಡಿದೆ.ನಿನ್ನೆ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

- Advertisement -

Latest News

error: Content is protected !!