Thursday, June 4, 2026
Homeಕ್ರೀಡೆಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ: ಮೃತ ಅಭಿಮಾನಿಗಳ ಕುಟುಂಬಕ್ಕೆ ಸರಕಾರದಷ್ಟೇ ಪರಿಹಾರ ಘೋಷಿಸಿದ ಆರ್‌ಸಿಬಿ

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ: ಮೃತ ಅಭಿಮಾನಿಗಳ ಕುಟುಂಬಕ್ಕೆ ಸರಕಾರದಷ್ಟೇ ಪರಿಹಾರ ಘೋಷಿಸಿದ ಆರ್‌ಸಿಬಿ

- Advertisement -
- Advertisement -

ಬೆಂಗಳೂರು: ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಮೃತಪಟ್ಟ 11 ಜನ ಸಂತ್ರಸ್ತರ ಕುಟುಂಬಗಳಿಗೆ ಆರ್‌ಸಿಬಿಯ ಆಡಳಿತ ಮಂಡಳಿ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

ಈಗಾಗಲೇ ಕರ್ನಾಟಕ ಸರ್ಕಾರ ತಲಾ 10 ಲಕ್ಷ ರೂ. ಘೋಷಣೆ ಮಾಡಿತ್ತು. ಇದರೊಂದಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಸಹ ತಲಾ ಐದು ಲಕ್ಷ ರೂ ಪರಿಹಾರ ಘೋಷಿಸಿದೆ.

ಹಾಗೆಯೇ ದುರಂತದಲ್ಲಿ ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು ಎನ್ನುವ ಭರವಸೆಯನ್ನು ಆರ್‌ಸಿಬಿ ನೀಡಿದೆ.

- Advertisement -

Latest News

error: Content is protected !!