Thursday, June 4, 2026
Homeಕರಾವಳಿಮಂಗಳೂರುಸೋಮವಾರ ಮಂಗಳೂರಿಗೆ ರಾಜ್ಯ ಬಿಜೆಪಿ ನಿಯೋಗ ಭೇಟಿ

ಸೋಮವಾರ ಮಂಗಳೂರಿಗೆ ರಾಜ್ಯ ಬಿಜೆಪಿ ನಿಯೋಗ ಭೇಟಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಬಂಧನ ಮತ್ತು ಗಡಿಪಾರು ನೋಟೀಸ್ ಗಳ ಹಿನ್ನೆಲೆಯಲ್ಲಿ ಜೂನ್ 9 ರಂದು ಸೋಮವಾರ ಮಂಗಳೂರಿಗೆ ಬಿಜೆಪಿ ರಾಜ್ಯ ನಾಯಕರ ನಿಯೋಗ ಭೇಟಿ ನೀಡಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ನಿಯೋಗದಲ್ಲಿ ಇರಲಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು ಮತ್ತು ಹಿಂದೂ ಸಂಘಟನೆಗಳ ಮುಖಂಡರನ್ನು ಭೇಟಿ ಮಾಡಲಿರುವ ಬಿಜೆಪಿ ನಿಯೋಗ ಪೊಲೀಸ್ ಕಾರ್ಯಾಚರಣೆ ಮತ್ತು ಗಡಿಪಾರು ನೋಟೀಸ್ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲಿದೆ.

ಇದೇ ವೇಳೆ, ಕೆಪಿಸಿಸಿಯಿಂದ ನೇಮಕವಾಗಿರುವ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ನೇತೃತ್ವದಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸದಲ್ಲಿದೆ.

- Advertisement -

Latest News

error: Content is protected !!