Tuesday, June 9, 2026
Homeಕರಾವಳಿಮಂಗಳೂರುಮಂಗಳೂರಿನಲ್ಲಿ ನಾಳೆ ಡಿಸಿ, ಎಸ್ಪಿ ಮತ್ತು ನಗರ ಪೊಲೀಸ್ ಕಮಿಷನರ್ ಜೊತೆ ವಿಪಕ್ಷ ನಾಯಕರ ಸಭೆ

ಮಂಗಳೂರಿನಲ್ಲಿ ನಾಳೆ ಡಿಸಿ, ಎಸ್ಪಿ ಮತ್ತು ನಗರ ಪೊಲೀಸ್ ಕಮಿಷನರ್ ಜೊತೆ ವಿಪಕ್ಷ ನಾಯಕರ ಸಭೆ

- Advertisement -
- Advertisement -

ಮಂಗಳೂರು: ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣ ದಾಖಲು, ಗಡಿಪಾರು ನೋಟೀಸ್ ಮತ್ತಿತರ ವಿಚಾರಗಳ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ನಿಯೋಗ ಮಂಗಳೂರಿಗೆ ಭೇಟಿ ನೀಡಲಿದೆ.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ದಕ್ಷಿಣ ಕನ್ನಡ ಡಿಸಿ, ಎಸ್ಪಿ ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರ್ ಜೊತೆ ಸಭೆ ನಡೆಸಲಿದ್ದಾರೆ.

ನಂತರ ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಲಿರುವ ಬಿಜೆಪಿ ನಾಯಕರು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನೀಲ್ ಕುಮಾರ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ನಿಯೋಗದಲ್ಲಿ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!