Saturday, June 6, 2026
Homeತಾಜಾ ಸುದ್ದಿಧಾರವಾಡ ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಅವರನ್ನು...

ಧಾರವಾಡ ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಅವರನ್ನು ವಶಕ್ಕೆ ಪಡೆದ ಸಿಬಿಐ

- Advertisement -
- Advertisement -

ಧಾರವಾಡ ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು. ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಆರೋಪಿಸಿ,  ಅವರನ್ನು 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು.

- Advertisement -

Latest News

error: Content is protected !!