Wednesday, June 24, 2026
Homeತಾಜಾ ಸುದ್ದಿಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿಸಿಎಂ ಡಿ.ಕೆ....

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

- Advertisement -
- Advertisement -

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ದುರಂತದ ಸ್ಥಳ ಮತ್ತು ಅಹಮದಾಬಾದ್ ನ ಸಿವಿಲ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕರು ಇಂದು ಭೇಟಿ ನೀಡಿ ಅವಘಡದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಸಭಾ ಸದಸ್ಯ ಸೈಯ್ಯದ್ ನಾಸಿರ್ ಹುಸೇನ್, ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ಘಟಕದ ಅಧ್ಯಕ್ಷ ಪವನ್ ಖೇರಾ ಮತ್ತಿತರರು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ನಂತರ ವಿಮಾನ ಪತನಗೊಂಡ ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್ ಸ್ಥಳಕ್ಕೆ ಕೂಡಾ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿವಿಲ್ ಆಸ್ಪತ್ರೆ ಬಳಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ದುರಂತದಲ್ಲಿ ಗಾಯಗೊಂಡಿರುವವರ ಪೈಕಿ ಕೆಲವರನ್ನು ಭೇಟಿ ಮಾಡಿದೆವು. ಉಳಿದವರು ತೀರಾ ಸುಟ್ಟ ಪರಿಸ್ಥಿತಿಯಲ್ಲಿರುವ ಕಾರಣ, ಸೂಕ್ಷ್ಮ ಪರಿಸ್ಥಿತಿಯಲ್ಲಿ ಅವರನ್ನು ಭೇಟಿ ಮಾಡುವುದು ಬೇಡ ಎಂಬ ಸಲಹೆಯಿಂದಾಗಿ ಭೇಟಿ ಮಾಡಲಿಲ್ಲ‌ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!