Friday, June 5, 2026
Homeಮನರಂಜನೆಶಿವಮೊಗ್ಗ:  ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ವೇಳೆ ಮತ್ತೊಂದು ದುರಂತ

ಶಿವಮೊಗ್ಗ:  ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ವೇಳೆ ಮತ್ತೊಂದು ದುರಂತ

- Advertisement -
- Advertisement -

ಶಿವಮೊಗ್ಗ:  ಕಾಂತಾರ ಚಾಪ್ಟರ್ 1 ಸಿನಿಮಾ ತಂಡದಲ್ಲಿ ಸರಣಿ ಸಾವುಗಳು, ಅನಾಹುತಗಳು ಆದ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.

ನಿನ್ನೆ ಶೂಟಿಂಗ್ ಮಾಡುವಾಗ ಹಡಗು ಮಗುಚಿ ಬಿದ್ದಿದ್ದು, ಚಿತ್ರದ ನಾಯಕರು ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರು ಸೇಫ್ ಆಗಿದ್ದಾರೆ. ಇದರ ಬೆನ್ನಲ್ಲೇ ಶಿವಮೊಗ್ಗ ಜಿಲ್ಲಾ ಆಡಳಿತದಿಂದ ಚಿತ್ರೀಕರಣಕ್ಕೆ ಅನುಮತಿ ಪಡೆಯದಿದ್ದರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ನೋಟಿಸ್ ನೀಡಿ ಉತ್ತರ ನೀಡುವಂತೆ ತಿಳಿಸಿದ್ದಾರೆ.

ಹೌದು ಅನುಮತಿ ಪಡೆಯದೆ ಕಾಂತಾರ ಸಿನಿಮಾ ಶೂಟಿಂಗ್ ನಡೆಸುತ್ತಿದ್ದು, ಸ್ಥಳೀಯ ಆಡಳಿತದಿಂದ ಅನುಮತಿ ಇಲ್ಲದೆ ಕಾಂತರಾ ಸಿನಿಮಾ ಶೂಟಿಂಗ್ ನಡೆಸುತ್ತಿದ್ದಾರೆ. ಹಾಗಾಗಿ ಚಿತ್ರತಂಡಕ್ಕೆ ನೋಟಿಸ್ ನೀಡುವುದಕ್ಕೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಗುರುದತ್ ಹೆಗ್ಡೆ ಸೂಚನೆ ನೀಡಿದ್ದಾರೆ. ಮಾಸ್ತಿಕಟ್ಟೆ ಮಾಣಿ ಡ್ಯಾಮ್ ಬಳಿ ಕಾಂತಾರ ಚತ್ರಿಕರಣ ನಡೆಯುತ್ತಿದ್ದು, ತಹಶೀಲ್ದಾರ್ ರಶ್ಮಿ ಮೂಲಕ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!