Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸವಣಾಲಿನಲ್ಲಿ ಸ್ಕೂಟರ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕುಳಿದ ಯುವಕರು

ಬೆಳ್ತಂಗಡಿ : ಸವಣಾಲಿನಲ್ಲಿ ಸ್ಕೂಟರ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕುಳಿದ ಯುವಕರು

- Advertisement -
- Advertisement -

ಬೆಳ್ತಂಗಡಿ : ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ  ನದಿಯಲ್ಲಿ ಯುವಕರಿಬ್ಬರು ಸ್ಕೂಟರ್ ಸಮೇತ  ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಜೂ.15 ರಂದು (ಭಾನುವಾರ) ನಡೆದಿದೆ.

ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಸ್ಕೂಟರ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಸ್ಕೂಟರ್ ನದಿ ಬದಿಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.

ಸೇತುವೆ ನಿರ್ಮಿಸಿ:

ಯಾವುದೇ ಸರ್ಕಾರಗಳು ಬಂದರೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ನಿವಾಸಿಗಳ ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ. ಅಭಿವೃದ್ಧಿಯ ಬರವಸೆ ಬರವಸೆಯಾಗಿಯೇ ಉಳಿದಿದೆ. ಸರ್ಕಾರಗಳು ಆದಿವಾಸಿಗಳ ಜೀವ ಬಲಿದಾನಕ್ಕಾಗಿ ರಣಹದ್ದಿನಂತೆ ಕಾಯುತ್ತಿರುವುದು ಸರಿಯಲ್ಲ. ಇಲ್ಲಿ ಸೇತುವೆ ನಿರ್ಮಾಣ ಮಾಡುವ ಮೂಲಕ ಜನರ ಜೀವ ಉಳಿಸಬೇಕು ಜೊತೆಗೆ ಈ ಪ್ರದೇಶಕ್ಕೆ ರಸ್ತೆ  , ಸೇತುವೆ ಸೇರಿದಂತೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಜಯಾನಂದ ಪಿಲಿಕಲ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು (ದ.ಕ) ಇವರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!