- Advertisement -
![]()
- Advertisement -
ಉಪ್ಪಿನಂಗಡಿ ; 34 ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆ ಪತ್ತೆಯಾಗಿದ್ದು ಆತಂಕ ಮೂಡಿಸಿದೆ.
ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು. ನದಿ ದಡದಲ್ಲಿ ಏನೋ ಮಲಗಿದೆ ಎಂದು ಮಕ್ಕಳು ಸ್ಥಳೀಯರಿಗೆ ತಿಳಿಸಿದ್ದರು. ಅದೇನೆಂದು ನೋಡಲು ಹೋದಾಗ ಮೊಸಳೆಯು ನದಿ ದಡದಲ್ಲಿ ವಿಶ್ರಾಂತಿ ಪಡೆಯುವುದು ಕಂಡು ಬಂತು. ಇವರು ಸ್ವಲ್ಪ ಹತ್ತಿರಕ್ಕೆ ಹೋದಾಗ ಮೊಸಳೆ ಆಕ್ರಮಣಕಾರಿಯಂತೆ ಇವರ ಕಡೆ ನೋಡಿದ್ದು, ಮತ್ತೆ ನದಿ ನೀರಿಗೆ ಇಳಿದು ನಾಪತ್ತೆಯಾಗಿದೆ. ಸದ್ಯ ಸ್ಥಳೀಯರು ನದಿ ಕಡೆ ತೆರಳದಂತೆ ಎಚ್ಚರವಹಿಸಲು ತಿಳಿಸಲಾಗಿದೆ.
- Advertisement -


