Wednesday, June 3, 2026
Homeಕರಾವಳಿಮಂಗಳೂರುತಾಳ ತಪ್ಪಿದ ಗಾಯಕಿ ಅಖಿಲಾ ಪಜಿಮಣ್ಣು ಅವರ ವೈವಾಹಿಕ ಬದುಕು; ಪುತ್ತೂರಿನ ಕೋರ್ಟ್ ನಲ್ಲಿ ವಿಚ್ಛೇದನಕ್ಕೆ...

ತಾಳ ತಪ್ಪಿದ ಗಾಯಕಿ ಅಖಿಲಾ ಪಜಿಮಣ್ಣು ಅವರ ವೈವಾಹಿಕ ಬದುಕು; ಪುತ್ತೂರಿನ ಕೋರ್ಟ್ ನಲ್ಲಿ ವಿಚ್ಛೇದನಕ್ಕೆ ಅರ್ಜಿ

- Advertisement -
- Advertisement -

ಪುತ್ತೂರು: ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಅಖಿಲಾ ಪಜಿಮಣ್ಣು ಅವರು ತಮ್ಮ 3 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದಾರೆ.

2022 ರಲ್ಲಿ ಅಖಿಲಾ ಸಾಫ್ಟ್ ವೇರ್ ಇಂಜಿನಿಯರ್ ಧನಂಜಯ್ ಶರ್ಮಾ ಅವರನ್ನು ವರಿಸಿದ್ದರು. ಆ ಬಳಿಕ ಅಮೇರಿಕಾ ತೆರಳಿ ಅಲ್ಲಿ ಪತಿಯೊಂದಿಗೆ ವಾಸವಾಗಿದ್ದರು. ಅಲ್ಲದೇ ಅಲ್ಲಿಂದ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಾಂಗ್ ವೀಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದರು. ಆದರೆ ಕಳೆದ ಕೆಲವು ತಿಂಗಳುಗಳ ಹಿಂದೆ ಅವರು ಭಾರತಕ್ಕೆ ವಾಪಾಸ್ಸಾಗಿದ್ದರು. ಇಬ್ಬರ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಅವರಿಬ್ಬರು ಡಿವೋರ್ಸ್ ಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಅಖಿಲಾ ಪಜಿಮಣ್ಣು ಮತ್ತ ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ (ಜೂನ್ 18) ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್‌ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಧನಂಜಯ್ ಶರ್ಮ ಅವರು ಪುತ್ತೂರಿನ ನ್ಯಾಯಾಲಯಕ್ಕೆ ಆಗಮಿಸಿ ಹೇಳಿಕೆ ನೀಡಿ ವಾಪಸ್ ತೆರಳಿದ್ದಾರೆ. ಸದ್ಯದಲ್ಲೇ ಅವರು ಅಮೆರಿಕಾಕ್ಕೆ ಹೋಗಲಿದ್ದಾರೆ. ಸದ್ಯ ನ್ಯಾಯಾಲಯದಲ್ಲಿ ಈ ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ಮುಗಿದಿದೆ. ನ್ಯಾಯಾಲಯವು ಶುಕ್ರವಾರಕ್ಕೆ (ಜೂನ್ 20) ತೀರ್ಪು ಕಾಯ್ದಿರಿಸಿದೆ.  ಈಗಾಗಲೇ ಅಖಿಲಾ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಿಂದ ಪತಿಯ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ.

- Advertisement -

Latest News

error: Content is protected !!