Friday, June 5, 2026
Homeಕರಾವಳಿಉಡುಪಿಕುಂದಾಪುರ: ದನಗಳಿಗೆ ಹುಲ್ಲು ತರಲು ಹೋಗಿದ್ದ ಯುವತಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಸಾವು

ಕುಂದಾಪುರ: ದನಗಳಿಗೆ ಹುಲ್ಲು ತರಲು ಹೋಗಿದ್ದ ಯುವತಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಸಾವು

- Advertisement -
- Advertisement -

ಕುಂದಾಪುರ: ದನಗಳಿಗೆ ಹುಲ್ಲು ತರಲು ಹೋಗಿದ್ದ ಯುವತಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆಯ ಜಂಬೆಹಾಡಿ ಎಂಬಲ್ಲಿ ನಡೆದಿದೆ.

ಜಡ್ಡಿನಗದ್ದೆಯ ಜಂಬೆಹಾಡಿ ಸಂಜೀವ ನಾಯ್ಕ ಮತ್ತು ನರ್ಸಿ ದಂಪತಿಯ ಪುತ್ರಿ ಮೂಕಾಂಬಿಕಾ (23) ಮೃತ ಯುವತಿ. ಮೂಕಾಂಬಿಕಾ ಬೆಳಗ್ಗೆ ಹುಲ್ಲು ತರಲು ಅತ್ತಿಗೆ ಅಶ್ವಿನಿ ಅವರೊಂದಿಗೆ ತೋಟಕ್ಕೆ ಹೋಗಿದ್ದರು. ಮನೆಗೆ ಹಿಂದಿರುಗುವಾಗ ಅಶ್ವಿನಿ ಅವರು ಹುಲ್ಲಿನ ಹೊರೆಯನ್ನು ಹೊತ್ತುಕೊಂಡು ಮನೆಯ ಕಡೆಗೆ ಹೊರಟಿದ್ದು, ಮೂಕಾಂಬಿಕಾ ಅವರನ್ನು ಹಿಂಬಾಲಿಸುತ್ತಿದ್ದರು. ಮನೆ ತಲುಪಿದ ಅಶ್ವಿನಿ ಅವರು ಹಿಂದಿರುಗಿ ನೋಡಿದಾಗ ಮೂಕಾಂಬಿಕಾ ಜೊತೆಗೆ ಇರಲಿಲ್ಲ. ಅವರನ್ನು ಕರೆಯುತ್ತ ಪುನಃ ತೋಟದ ಕಡೆಗೆ ತೆರಳಿದರು. ಮನೆಗೆ ಬರುವ ಇನ್ನೊಂದು ಮಾರ್ಗವಾದ ಜಂಬೆಹಾಡಿ ಮಾರ್ಗವಾಗಿ ಮೂಕಾಂಬಿಕಾ ಅವರನ್ನು ಹುಡುಕುತ್ತ ಬಂದಾಗ ಅಣೆಕಟ್ಟಿನ ದಂಡೆಯ ಮೇಲೆ ಹುಲ್ಲು ಕೊಯ್ಯುವ ಕತ್ತಿ ಕಾಣಿಸಿತು. ಭಯದಿಂದ ಅಶ್ವಿನಿ ಅವರು ಬೊಬ್ಬೆ ಹಾಕಿದಾಗ ಮನೆಯವರು ಓಡಿ ಬಂದು ಅಣೆಕಟ್ಟಿನಲ್ಲಿ ಹುಡುಕಿದ್ದು ಮೃತದೇಹ ಪತ್ತೆಯಾಯಿತು.

ಮರಳಿ ಬರುವಾಗ ಅಶ್ವಿನಿ ಅವರು ಅಣೆಕಟ್ಟಿನ ಕೆಳಭಾಗದಲ್ಲಿ ಹೊಳೆಗೆ ಇಳಿದು ದಾಟಿಕೊಂಡು ಬಂದಿದ್ದರು. ಆದರೆ ಮೂಕಾಂಬಿಕಾ ಅವರು ಅಲ್ಲಿ ಅತ್ತಿಗೆಯನ್ನು ಹಿಂಬಾಲಿಸದೆ ಅಣೆಕಟ್ಟಿನ ದಂಡೆಯ ಮೇಲಿನಿಂದ ಬಂದ ಕಾರಣ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!