Saturday, June 13, 2026
Homeಕರಾವಳಿಮಂಗಳೂರುಮಂಗಳೂರು: ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬ್ಯೂಟಿ ಸೆಲೂನ್ ಮೇಲೆ ಪೊಲೀಸರ ದಾಳಿ

ಮಂಗಳೂರು: ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬ್ಯೂಟಿ ಸೆಲೂನ್ ಮೇಲೆ ಪೊಲೀಸರ ದಾಳಿ

- Advertisement -
- Advertisement -

ಮಂಗಳೂರು: ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬ್ಯೂಟಿ ಸೆಲೂನ್ ಒಂದರ ಮೇಲೆ ಪೊಲೀಸರು ದಾಳಿ ಮಾಡಿರುವ ಘಟನೆ ಬಿಜೈನಲ್ಲಿ ನಡೆದಿದೆ.

ಉಡುಪಿಯ ಬ್ರಹ್ಮಗಿರಿಯ ವ್ಯಕ್ತಿಯೊಬ್ಬರ ಒಡೆತನದ ಬಿಜೈನಲ್ಲಿರುವ ಸಿಕ್ಸ್ತ್ ಸೆನ್ಸ್ ಬ್ಯೂಟಿ ಸಲೂನ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 55/2025 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 3(1), 4, 5 ಮತ್ತು 6 ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

ಇದರ ಜೊತೆಗೆ, ಸಂಸ್ಥೆಯ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡುವ ವರದಿಯನ್ನು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಸಲ್ಲಿಸಿದ್ದಾರೆ. ವರದಿಯ ಮೇರೆಗೆ ಕಾರ್ಯನಿರ್ವಹಿಸಿದ ಆಯುಕ್ತರು ಸಲೂನ್‌ನ ವ್ಯಾಪಾರ ಪರವಾನಗಿಯನ್ನು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ.

- Advertisement -

Latest News

error: Content is protected !!