Monday, June 8, 2026
Homeಕರಾವಳಿಮಂಗಳೂರುಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; 8 ಮಂದಿ ಆರೋಪಿಗಳನ್ನು ಎನ್ ಐಎ ಕಸ್ಟಡಿಗೆ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; 8 ಮಂದಿ ಆರೋಪಿಗಳನ್ನು ಎನ್ ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

- Advertisement -
- Advertisement -

ಮಂಗಳೂರು; ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳನ್ನು ಎನ್ ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.

ಪ್ರಕರಣ ಸಂಬಂಧ ಎನ್‌ಐಎ ಪ್ರತ್ಯೇಕವಾಗಿ ಎಫ್​ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.


ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದ. ಒಂದು ವೇಳೆ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.

- Advertisement -

Latest News

error: Content is protected !!