Saturday, June 6, 2026
Homeಕರಾವಳಿಮಂಗಳೂರುಪುತ್ತೂರು : ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ: ಮಹಿಳೆಯಿಂದ ದೂರು ದಾಖಲು

ಪುತ್ತೂರು : ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ: ಮಹಿಳೆಯಿಂದ ದೂರು ದಾಖಲು

- Advertisement -
- Advertisement -

ಪುತ್ತೂರು : ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು  ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ .

ಬಂಟ್ವಾಳ ಕುಕ್ಕಾಜೆ ಅಬ್ದುಲ್ ಖಾದರ್‌ರವರ ಪುತ್ರಿ ಮಮ್ರಾಜ್ ದೂರು ನೀಡಿದ ಮಹಿಳೆ. ಗಂಡ, ಅತ್ತೆ, ನಾದಿನಿಯರು ಹಾಗೂ ಮೈದುನ ಸೇರಿಕೊಂಡು ಹೆಚ್ಚಿನ ವರದಕ್ಷಿಣೆ ಕೇಳಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿದ್ದಾರೆ ಹಾಗೂ ಗಂಡ ತ್ರಿವಳಿ ತಲಾಕ್ ನೀಡಿದ್ದಾರೆಂದು ಆರೋಪಿಸಿದ್ದಾರೆ.

ತನ್ನ ಗಂಡ ಕೊಡಿಪಾಡಿ ಜೋಳ ನಿವಾಸಿ ಮುಹಮ್ಮದ್ ಶರೀಫ್‌, ಅತ್ತೆ ಖತೀಜಾ, ಮೈದುನ ಅಹಮದ್ ಸಿರಾಜುಲ್ ಮುನೀರ್, ನಾದಿನಿಯರಾದ ಸುಮಯ್ಯ, ಆಯಿಷಾ ಎಂಬವರ ಮೇಲೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!