Wednesday, June 24, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಸ್ಪರ್ಶಿಸಿ ಕೃಷಿಕ ಸಾವು

ಉಪ್ಪಿನಂಗಡಿ; ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಸ್ಪರ್ಶಿಸಿ ಕೃಷಿಕ ಸಾವು

- Advertisement -
- Advertisement -

ಉಪ್ಪಿನಂಗಡಿ; ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಸ್ಪರ್ಶಿಸಿ ಕೃಷಿಕ ಸಾವನ್ನಪ್ಪಿರುವ ಘಟನೆ ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ಶನಿವಾರ ನಡೆದಿದೆ.

ಅರಸಿನಮಕ್ಕಿ ಗ್ರಾಮದ ಉಡ್ಯೆರೆ ಮನೆ ನಿವಾಸಿ ಕೃಷ್ಣಪ್ಪ ಕುಲಾಲ್ (49) ಮೃತರು. ಪರ್ಕಳದ ತೋಟದಲ್ಲಿ ಅಡಕೆ ಕೃಷಿಗೆ ಔಷಧಿ ಸಿಂಪಡಿಸುವಾಗ ಬಳಸಿದ ದೋಟಿಯು ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವಿದ್ಯುತ್ ಆಘಾತಕ್ಕೆ ಒಳಗಾಗಿಗದ್ದಾರೆ. ಕೂಡಲೇ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತ್ತಾದರೂ, ಅವರಾಗಲೇ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಮೃತ ಕೃಷ್ಣಪ್ಪ ಕುಲಾಲ್ ಅರಸಿನಮಕ್ಕಿ ಕುಲಾಲರ ಸಮಾಜಸೇವಾ ಸಂಘದ ಮಾಜಿ ಅಧ್ಯಕ್ಷರಾಗಿಯೂ, ಪ್ರಸಕ್ತ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಒರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!