ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕುರಿತಾಗಿ ಆಕ್ಷೇಪಾರ್ಹ ಮಾತುಗಳನ್ನಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬೆಂಗಳೂರಿನ ಜೆ.ಪಿ. ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಜುಲೈ 1 ರಂದು ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಎದುರು ಅರಣ್ಯ ಇಲಾಖೆ ವಿರುದ್ಧದ ಪ್ರತಿಭಟನೆ ಮುಗಿದ ಬಳಿಕ ರವಿಕುಮಾರ್ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧವಾಗಿ ಕಾಂಗ್ರೆಸ್ ನಿಯೋಗ ವಿಧಾನ ಪರಿಷತ್ ಸಭಾಪತಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಐಎಎಸ್ ಅಧಿಕಾರಿಗಳ ಸಂಘ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಮನವಿ ಮಾಡಿದೆ.
ಪ್ರಕರಣ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ರವಿಕುಮಾರ್, ತಾವು ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
[11:20 pm, 3/7/2025] Jikujje: ವಿಧಾನ ಪರಿಷತ್ ವಿಪಕ್ಷ ಮು