ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಇನ್ನು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ, ತುರ್ತು ವಿಚಾರಣೆ ನಡೆಸುವಂತೆ ರವಿಕುಮಾರ್ ಪರ ವಕೀಲರು ಮನವಿ ಮಾಡಿದ್ದು, ಮನವಿ ಪರಿಗಣಿಸಿರುವ ಹೈಕೋರ್ಟ್ ಇಂದು ಮಧ್ಯಾಹ್ನದ ಬಳಿಕ ವಿಚಾರಣೆಗೆ ಸಮ್ಮತಿ ನೀಡಿದೆ.
ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ರವಿಕುಮಾರ್ ವಿರುದ್ಧ ಜೆ.ಪಿ.ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.