Saturday, July 5, 2025
Homeಮನರಂಜನೆಕಾರ್ ರೇಸಿಂಗ್ ಗೆ ಕಿಚ್ಚ ಸುದೀಪ್ ಗ್ರ್ಯಾಂಡ್ ಎಂಟ್ರಿ; ಕಾರ್‌ ರೇಸ್ ಫೆಸ್ಟಿವಲ್‌ನಲ್ಲಿ ಬೆಂಗಳೂರು ತಂಡವನ್ನು...

ಕಾರ್ ರೇಸಿಂಗ್ ಗೆ ಕಿಚ್ಚ ಸುದೀಪ್ ಗ್ರ್ಯಾಂಡ್ ಎಂಟ್ರಿ; ಕಾರ್‌ ರೇಸ್ ಫೆಸ್ಟಿವಲ್‌ನಲ್ಲಿ ಬೆಂಗಳೂರು ತಂಡವನ್ನು ಖರೀದಿಸಿ ಅಭಿನಯ ಚಕ್ರವರ್ತಿ

spot_img
- Advertisement -
- Advertisement -

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಕಾರ್ ರೇಸಿಂಗ್ ಗೆ  ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಇಂಡಿಯನ್ ಕಾರ್‌ ರೇಸ್ ಫೆಸ್ಟಿವಲ್‌ನಲ್ಲಿ ಬೆಂಗಳೂರು ತಂಡವನ್ನು ಖರೀದಿಸಿದ್ದಾರೆ.

ಇನ್ನು ಕಿಚ್ಚ ಖರೀದಿಸಿದ ತಂಡಕ್ಕೆ ಕಿಚ್ಚಾಸ್ ಕಿಂಗ್ಸ್ ಎಂದು ಹೆಸರನ್ನು ಇಡಲಾಗಿದೆ. ಬೆಂಗಳೂರು ಟೀಮ್ ಓನರ್ ಆಗಿರುವ ಕಿಚ್ಚ ತಂಡಕ್ಕೆ ಬೆಂಗಳೂರು ಟೀಮ್ ಎಂದೇ ಹೆಸರಿಡುತ್ತಾರೆ ಎಂದು ಸುದೀಪ್‌ ಭಾವಿಸಿದ್ದರು. ಆದರೆ ಕಿಚ್ಚಾಸ್ ಕಿಂಗ್ಸ್ ಎಂದು ಹೆಸರಿಟ್ಟಿದ್ದಕ್ಕೆ ಸುದೀಪ್‌ ಖುಷಿಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಓನರ್‌ಶಿಪ್ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ಮಾಡಲಾಗುವ ಆಟಕ್ಕೆ ಈ ರೇಸ್‌ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಷ್ಟೇ ಅಲ್ಲದೇ ಈ ರೇಸ್ ಸುಲಭದ್ದಲ್ಲ ಎಂದಿದ್ದಾರೆ. ರೇಸ್‌ಕಾರ್‌ನಲ್ಲಿ ಕೂರುವ ಆಸೆ ಎಲ್ಲರಿಗೂ ಇರುತ್ತೆ, ಆದರೆ ಓನರ್ ಆಗಿದ್ದರೂ ಸುದೀಪ್‌ಗೆ ಕಾರ್‌ನೊಳಗೆ ಕೂರುವ ಅವಕಾಶ ಇಲ್ಲ ಲೈಸೆನ್ಸ್ ಇದ್ದವರು ಮಾತ್ರ ಕೂರಬೇಕಾಗುತ್ತೆ ಕರಾರುವಕ್ಕಾಗಿ ಹೇಳಿದ್ದಾರೆ. ಅಂದಹಾಗೆ ಇಂಡಿಯನ್ ರೇಸ್ ಫೆಸ್ಟಿವಲ್‌ಗೆ ಓನರ್‌ಶಿಪ್ ಆಯ್ಕೆಯನ್ನ ಬಿಡ್ಡಿಂಗ್ ಮೂಲಕವೇ ಆಯ್ಕೆ ಮಾಡಲಾಗುತ್ತದೆ. ಕಾರ್ ರೇಸ್ ಸ್ಪರ್ಧೆಗೆ ಕಿಚ್ಚ ಓನರ್ ಆಗಿರುವ ಕಾರಣ ನಿಮ್ಮ ಇಷ್ಟದ ಕಾರು ಯಾವುದು ಎಂಬ ಪ್ರಶ್ನೆಯನ್ನು ಕೇಳಲಾಯಿತು. ಅದಕ್ಕೆ ಉತ್ತರಿಸಿದ ಸುದೀಪ್ ನನ್ನ ಮೊದಲ ಕಾರ್ ಮಾರುತಿ 800. ಅದೇ ನನ್ನ ಸೂಪರ್ ಕಾರ್ ಎಂದಿದ್ದಾರೆ.

ಆಗಸ್ಟ್ ತಿಂಗಳಲ್ಲಿ ರೇಸ್ ಆರಂಭವಾಗಲಿದ್ದು ಬೆಂಗಳೂರು, ದೆಹಲಿ, ಹೈದರಾಬಾದ್, ಕೋಲ್ಕತ್ತಾ, ಚೆನ್ನೈ, ಗೋವಾ ಫ್ರಾಂಚೈಸಿಗಳ ಮಧ್ಯೆ ಸ್ಪರ್ಧೆ ನಡೆಯಲಿದೆ.

- Advertisement -
spot_img

Latest News

error: Content is protected !!