- Advertisement -
- Advertisement -
ನೆಲ್ಯಾಡಿ; ನೆಲ್ಯಾಡಿ ಸಮೀಪ ಮಣ್ಣಗುಂಡಿಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಮುಂಜಾನೆ ಗುಡ್ಡ ಕುಸಿತವಾಗಿದ್ದು ವಾಹನ ಸವಾರರು ಪರದಾಡುವಂತಾಗಿತ್ತು.
ಗುಡ್ಡ ಕುಸಿತದ ಪರಿಣಾಮವಾಗಿ ರಸ್ತೆಯಲ್ಲಿ ಹಲವು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಳಿಕ ಸಂಬಂಧಪಟ್ಟ ಇಲಾಖೆ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿದ್ದಾರೆ.
ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೆ ಅಗೆದಿರೋದರಿಂದ ಮಳೆಯಾದಾಗ ಗುಡ್ಡ ಕುಸಿತ ಉಂಟಾಗುತ್ತಿದೆ . ಇದು ಈಗಾಗಲೇ ನಾಲ್ಕನೇ ಬಾರಿಗೆ ಸಂಭವಿಸುತ್ತಿದ್ದು, ಸ್ಥಳೀಯರಲ್ಲಿ ಭಯ ಹೆಚ್ಚಾಗಿದೆ. ಶಿರೂರು ದುರಂತವನ್ನು ನೆನಪಿಸುತ್ತಾ ವಾಹನ ಸವಾರರು ಆತಂಕದಲ್ಲಿ ವಾಹನ ಚಲಾಯಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂಬುದು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
- Advertisement -