ಮಂಗಳೂರು; ಮಾದಕವಸ್ತು ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರದ ) ಧ್ರುವ್ ಡಿ ಶೆಟ್ಟಿ (22) ಬಂಧಿತ ಆರೋಪಿ.
ದಿನಾಂಕ: 02-07-2025 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ : 31/2025 0. 8(c),20(b)(ii) (B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣದಲ್ಲಿ ಭಾಗಿಯಾಗಿದ್ದ 05 ಜನ ಆರೋಪಿತರನ್ನು ಈಗಾಗಲೇ ದಿನಾಂಕ:02-07-2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣದಲ್ಲಿ ತನಿಖೆ ಮುಂದುವರೆಸಿ 05 ಜನ ಆರೋಪಿತರಿಗೆ ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪಿತನನ್ನು ಮೈಸೂರಿನಲ್ಲಿ ಪತ್ತೆ ಮಾಡಿ ಈ ದಿನ ದಿನಾಂಕ:06-07-2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ಆರೋಪಿತನು ಕೃತ್ಯಕ್ಕೆ ಬಳಸಿದ 01- ಮೊಬೈಲ್ ಫೋನ್ ಹಾಗೂ 1- ದ್ವಿಚಕ್ರ ವಾಹನ ವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಭಾಗವಹಿಸಿರುತ್ತಾರೆ. ಸಿಬ್ಬಂದಿರವರು ಭಾಗವಹಿಸಿದ್ದಾರೆ.