- Advertisement -
- Advertisement -
ಬೆಂಗಳೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ವೈಮಾನಿಕ ಪ್ರದರ್ಶನದ ಕುರಿತು ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.
ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ 04.30ಕ್ಕೆ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುವ ಏರ್ ಶೋ ಮಾದರಿಯಲ್ಲೇ ದಸರಾ ಹಬ್ಬದ ಸಮಯದಲ್ಲಿ ಕೂಡಾ ವೈಮಾನಿಕ ಪ್ರದರ್ಶನ ಏರ್ಪಡಿಸಿ ಪ್ರವಾಸಿಗರನ್ನು ಹೆಚ್ಚು ಸೆಳೆಯುವ ಚಿಂತನೆಯನ್ನು ರಾಜ್ಯ ಸರ್ಕಾರ ಹೊಂದಿದೆ.
- Advertisement -