Monday, July 7, 2025
Homeತಾಜಾ ಸುದ್ದಿʻವೈರಲ್‌ ವಯ್ಯಾರಿ …’ ಹಾಡಿಗೆ ಭರ್ಜರಿ ಡ್ಯಾನ್ಸ್‌ ಮಾಡಿದ ಶ್ರೀಲೀಲಾ

ʻವೈರಲ್‌ ವಯ್ಯಾರಿ …’ ಹಾಡಿಗೆ ಭರ್ಜರಿ ಡ್ಯಾನ್ಸ್‌ ಮಾಡಿದ ಶ್ರೀಲೀಲಾ

spot_img
- Advertisement -
- Advertisement -

ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಹಾಗೂ ಶ್ರೀಲೀಲಾ ಅಭಿನಯದ ಸಿನಿಮಾ ‘ಜೂನಿಯರ್‌’ ಇದೇ ಜುಲೈ 18ರಂದು ಬಿಡುಗಡೆಯಾಗಲಿದ್ದು, ಇದೀಗ ಚಿತ್ರದ ಎರಡನೇ

‘ವೈರಲ್‌ ವಯ್ಯಾರಿ …’ ಎನ್ನುವ ಹಾಡು ಬಿಡುಗಡೆಯಾಗಿದ್ದು, ಈ ಹಾಡಿಗೆ ಪವನ್‌ ಭಟ್‌ ಸಾಹಿತ್ಯ ಬರೆದಿದ್ದು, ಹರಿಪ್ರಿಯಾ ಮತ್ತು ದೀಪಕ್‌ ಬ್ಲೂ ಧ್ವನಿಯಾಗಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತವನ್ನು ನೀಡಿದ್ದು, ಕಿರೀಟಿ ಮತ್ತು ಶ್ರೀಲೀಲಾ ಹೆಜ್ಜೆ ಹಾಕಿದ್ದಾರೆ.

ಈ ಸಿನಿಮಾದಲ್ಲಿ ರವಿಚಂದ್ರನ್‍ ಮತ್ತು ಕಿರೀಟಿ ತಂದೆ-ಮಗನಾಗಿ ಕಾಣಿಸಿಕೊಂಡಿದ್ದು, ರವಿಚಂದ್ರನ್‍ ಅವರ ಮಗಳಾಗಿ ಜೆನಿಲಿಯಾ ಅಭಿನಯಿಸಿದ್ದಾರೆ. ಇನ್ನು ಪುನೀತ್ ರಾಜ್‌ಕುಮಾರ್ ನಿರ್ಮಿಸಿದ್ದ ‘ಮಾಯಾಬಜಾರ್’ ಸಿನಿಮಾದ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, ‘ಬಾಹುಬಲಿ’ ಮತ್ತು ‘RRR’ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದ ಸೆಂಥಿಲ್‍ ಕುಮಾರ್‍ ಈ ಚಿತ್ರದ ಛಾಯಾಗ್ರಹಣವನ್ನು ಮಾಡಿದ್ದಾರೆ.

‘ಜೂನಿಯರ್‌’ ಚಿತ್ರವು ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

- Advertisement -
spot_img

Latest News

error: Content is protected !!