Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ; ಯುವತಿಗೆ ಚಾಕುವಿನಿಂದ ಇರಿದು ಆಕೆಯ ಮನೆಯ ಒಳಗೇ ಆತ್ಮಹತ್ಯೆಗೆ ಶರಣಾದ ಯುವಕ

ಬಂಟ್ವಾಳ; ಯುವತಿಗೆ ಚಾಕುವಿನಿಂದ ಇರಿದು ಆಕೆಯ ಮನೆಯ ಒಳಗೇ ಆತ್ಮಹತ್ಯೆಗೆ ಶರಣಾದ ಯುವಕ

- Advertisement -
- Advertisement -

ಬಂಟ್ವಾಳ; ಯುವತಿಗೆ ಚಾಕುವಿನಿಂದ ಇರಿದು ಆಕೆಯ ಮನೆಯ ಒಳಗೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಕೊಣ್ಮಾಣ್ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ.ದಿವ್ಯಾ ಯಾನೆ ದೀಕ್ಷಿತಾ(26) ಚೂರಿ ಇರಿತಕ್ಕೆ ಒಳಗಾದ ಯುವತಿ.

ಸುಧೀರ್ ಹಾಗೂ ದಿವ್ಯಾ ಯಾನೆ ದೀಕ್ಷಿತಾ 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹಾಗಾಗಿ ದಿವ್ಯಾ ಸುಧೀರ ಜೊತೆ ಮಾತುಕತೆ ನಿಲ್ಲಿಸಿದ್ದಳು. ಆದರೂ ಸಹ ಆರೋಪಿ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು, ಮಾಡುತ್ತಿದ್ದ ಎಂದು ಹೇಳಲಾಗಿದೆ.

ಇಂದು ಬೆಳಿಗ್ಗೆ ಫರಂಗಿಪೇಟೆ, ಸುಜೀರ್ ಮಲ್ಲಿ ಎಂಬಲ್ಲಿಗೆ ಆರೋಪಿ ಸುಧೀರ್ ಮತ್ತು ದಿವ್ಯಾ ಮಾತುಕತೆಗೆ ಬಂದಿದ್ದಾರೆ. ಈ ವೇಳೆ ಆರೋಪಿ ಸುಧೀರ್ ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಸಿ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾ ನನ್ನು ಸಾಯಿಸಲು ಚುಚ್ಚಿರುತ್ತಾನೆ. ಆಕೆ ತಪ್ಪಿಸಿಕೊಂಡು ಓಡಿ ಹೋಗಿ ಬಿದ್ದಿದ್ದಾಳೆ. ಈ ವೇಳೆ ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಆರೋಪಿಯು ಅಲ್ಲಿಂದ ತೆರಳಿ ದಿವ್ಯಾಳ ಬಾಡಿಗೆ ಮನೆಗೆ ಹೋಗಿ, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!