Friday, June 5, 2026
Homeಕರಾವಳಿಮಂಗಳೂರುಮಂಗಳೂರು; ಬಾಲಕಿಯ ಅಪಹರಣ ಪ್ರಕರಣ; ದಂಪತಿ ಸೇರಿ ಮೂವರ ಬಂಧನ

ಮಂಗಳೂರು; ಬಾಲಕಿಯ ಅಪಹರಣ ಪ್ರಕರಣ; ದಂಪತಿ ಸೇರಿ ಮೂವರ ಬಂಧನ

- Advertisement -
- Advertisement -

ಮಂಗಳೂರು; ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಬಾಲಕಿಯನ್ನು ಅಪಹರಿಸಿದ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಶಹಬಾಝ್ (27) ಹಾಗೂ ಆತನಿಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್ ಆತನ ಪತ್ನಿ ನಿಶಾ ಬಂಧಿತರು.

ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಾಡಿಗೆಯ ಮನೆಯಲ್ಲಿ ವಾಸವಿರುವ 16 ವರ್ಷದ ಬಾಲಕಿಯೊಬ್ಬಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನು ಅಪಹರಿಸಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನು ಬಂಧಿಸಿ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!