Friday, June 5, 2026
Homeಕರಾವಳಿಮಂಗಳೂರುಪುತ್ತೂರು; ಬಸ್ ಚಲಾಯಿಸುತ್ತಿದ್ದಾಗಲೇ ಅಸ್ವಸ್ಥಗೊಂಡ ಕೆಎಸ್ ಆರ್ ಟಿಸಿ ಬಸ್ ಚಾಲಕ

ಪುತ್ತೂರು; ಬಸ್ ಚಲಾಯಿಸುತ್ತಿದ್ದಾಗಲೇ ಅಸ್ವಸ್ಥಗೊಂಡ ಕೆಎಸ್ ಆರ್ ಟಿಸಿ ಬಸ್ ಚಾಲಕ

- Advertisement -
- Advertisement -

ಪುತ್ತೂರು; ಬಸ್ ಚಲಾಯಿಸುತ್ತಿದ್ದಾಗಲೇ ಕೆಎಸ್ ಆರ್ ಟಿಸಿ ಬಸ್ ಚಾಲಕ ಅಸ್ವಸ್ಥಗೊಂಡ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ನಡೆದಿದೆ.

ಪುತ್ತೂರಿನಿಂದ ಸುಳ್ಯಕ್ಕೆ ಚಾಲಕ ದಯಾನಂದ ಎಂಬುವರು ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಅವರು ಪಾರು ಮಾಡಿದ್ದಾರೆ. ಬಸ್‌ ಕಂಬ್ರಕ್ಕೆ ತಲುಪುತ್ತಿದ್ದಂತೆ ದಯಾನಂದ ಅವರು ಅಸ್ವಸ್ಥಗೊಂಡಿದ್ದಾರೆ. ಸ್ಥಳೀಯರು ಅವರನ್ನು ಸ್ಥಳೀಯ ಕ್ಲಿನಿಕ್ ಒಂದಕ್ಕೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಔಷಧಿ ನೀಡಿದ್ದರು. ಔಷಧಿ ಸೇವಿಸಿದ ಬಳಿಕ ಚೇತರಿಸಿಕೊಂಡ ಅವರನ್ನು ಮನೆಗೆ ಕಳುಹಿಸಿ ಕೊಡಲಾಯಿತು. ಪ್ರಯಾಣಿಕರನ್ನು ಬದಲಿ ಬಸ್‌ನಲ್ಲಿ ಕಳುಹಿಸಲಾಯಿತು.

- Advertisement -

Latest News

error: Content is protected !!