Wednesday, July 9, 2025
Homeತಾಜಾ ಸುದ್ದಿಸೇತುವೆ ಕುಸಿದುಬಿದ್ದು 8 ಮಂದಿ ಸಾವು: ಹಲವರು ನಾಪತ್ತೆ

ಸೇತುವೆ ಕುಸಿದುಬಿದ್ದು 8 ಮಂದಿ ಸಾವು: ಹಲವರು ನಾಪತ್ತೆ

spot_img
- Advertisement -
- Advertisement -

ಗುಜರಾತ್: ವಡೋದರಾ ಜಿಲ್ಲೆಯ ಪದ್ರಾದಲ್ಲಿ ಇಂದು ಬೆಳಿಗ್ಗೆ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಆಡಳಿತ ಧಾವಿಸಿದ್ದು, ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇನ್ನು ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್‌ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್‌ನ್ನು ಸಂಪರ್ಕಿಸುತ್ತದೆ. ಘಟನೆ ಬಳಿಕ ಹಲವಾರು ವಾಹನಗಳು ನೀರಿನಲ್ಲಿ ಮುಳುಗಿದ್ದು, ಇಲ್ಲಿಯವರೆಗೆ 10ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -
spot_img

Latest News

error: Content is protected !!