Wednesday, July 9, 2025
Homeತಾಜಾ ಸುದ್ದಿಪಾಠ ಕೇಳುವಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಪಾಠ ಕೇಳುವಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

spot_img
- Advertisement -
- Advertisement -

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾನೆ.

ಮೃತಪಟ್ಟ ವಿದ್ಯಾರ್ಥಿಯನ್ನು ಮನೋಜ್‌ ಕುಮಾರ್‌ ಎನ್ನಲಾಗಿದೆ.

ಹೃದಯಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದ ಮನೋಜ್‌ಗೆ ಶಾಲೆಯಲ್ಲಿ ಪಾಠ ಕೇಳುವಾಗ ಹೃದಯಾಘಾತವಾಗಿದೆ. ತಕ್ಷಣ ಮನೋಜ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆ ಮನೋಜ್‌ ಕುಮಾರ್‌ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

- Advertisement -
spot_img

Latest News

error: Content is protected !!