- Advertisement -
![]()
- Advertisement -
ಬೆಳ್ತಂಗಡಿ; ಫೇಸ್ ಬುಕ್ ನಲ್ಲಿ ಧರ್ಮಸ್ಥಳದ ಕುರಿತಾಗಿ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್ ಎನ್ (28) ಎಂಬವರ ದೂರಿನಂತೆ, ಸದ್ರಿಯವರು ದಿನಾಂಕ: 11-07-2025 ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಫೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರದ್ಧಾಕೇಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಹಾಗೂ ಆಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಚೇತನ್ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -


