ಬೆಂಗಳೂರು; ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನಾಳಿದ ಅಭಿನೇತ್ರಿ ಬಿ ಸರೋಜಾದೇವಿ (87) ವಿಧಿವಶರಾಗಿದ್ದಾರೆ. ಬೆಂಗಳೂರಿನ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಬಿ.ಸರೋಜಾದೇವಿ ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು.. ಇವರು ಕನ್ನಡ, ತೆಲಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿಯೂ ನಟಿಸಿ ಖ್ಯಾತಿ ಪಡೆದದ್ದರು.. 1955 ರಿಂದ 1984ರವರೆಗೂ ಸತತ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.
ನಟಿ ಸರೋಜಾದೇವಿ ಅವರಿಗೆ 1969ರಲ್ಲಿ ಪದ್ಮಶ್ರೀ ಪ್ರಶಸ್ತಿ 1992ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು.. ಇದಲ್ಲದೇ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯೂ ದೊರಕಿದೆ.
ಸರೋಜಾದೇವಿ ಕಿತ್ತೂರು ಚೆನ್ನಮ್ಮ, ಭಕ್ತ ಕನಕದಾಸ, ಬೆಟ್ಟದ ಹೂವು, ನಾಗಕನ್ಯೆ, ಮಹಾಕವಿ ಕಾಳಿದಾಸ ಸೇರಿದಂತೆ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು.. ಅಲ್ಲದೇ ಇವರು ಕರ್ಪೂರ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ, ನಾಡೋಡಿ ಮನ್ನನ್‌ನಂತಹ ತಮಿಳು ಚಿತ್ರಗಳಲ್ಲಿಯೂ ಅಭಿನಯಿಸಿದ್ದರು..


