- Advertisement -
![]()
- Advertisement -
ಹಾಸನ; ಕಾರೊಂದು ಜಲಪಾತಕ್ಕೆ ಉರುಳಿ ಬಿದ್ದ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.
ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಅದನ್ನು ವೀಕ್ಷಿಸುವಾಗ ಪ್ರವಾಸಿಗರು ಎಚ್ಚರಿದೆ ವಹಿಸಬೇಕಿದೆ. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


