Saturday, June 6, 2026
Homeತಾಜಾ ಸುದ್ದಿಇಂದು ನಟಿ ಸರೋಜಾದೇವಿ ಅಂತ್ಯಕ್ರಿಯೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ

ಇಂದು ನಟಿ ಸರೋಜಾದೇವಿ ಅಂತ್ಯಕ್ರಿಯೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ

- Advertisement -
- Advertisement -

ಬೆಂಗಳೂರು: ನಿನ್ನೆ ನಿಧನರಾದ ಬಹುಭಾಷಾ ನಟಿ ಬಿ. ಸರೋಜಾದೇವಿ ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಮತ್ತು ಸಿನಿಮಾ ರಂಗದ ಗಣ್ಯರು ಇಂದು ಸರೋಜಾದೇವಿ ಅವರ ಪಾರ್ಥಿವ ಶರೀರಕ್ಕೆ ಇಂದು ಅಂತಿಮ ನಮನ ಸಲ್ಲಿಸಿದ್ದಾರೆ.

ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಇಂದು ಬೆಳಗ್ಗೆ ಅಗಲಿದ ನಟಿಯ ಅಂತಿಮ ದರ್ಶನ ಪಡೆದರು.

ಪಾರ್ಥಿವ ಶರೀರವನ್ನು ರಸ್ತೆ ಮಾರ್ಗವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ನಿವಾಸದಿಂದ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತಿದ್ದು, ಸರೋಜಾದೇವಿ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಈಗಾಗಲೇ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆಗೆ ಎಲ್ಲಾ ಸಿದ್ದತೆ ಮಾಡಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

- Advertisement -

Latest News

error: Content is protected !!