Wednesday, June 24, 2026
Homeತಾಜಾ ಸುದ್ದಿಮಲ್ಟಿಪ್ಲೆಕ್ಸ್ ಸೇರಿ ಚಲನಚಿತ್ರ ಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ನಿಗದಿಪಡಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ

ಮಲ್ಟಿಪ್ಲೆಕ್ಸ್ ಸೇರಿ ಚಲನಚಿತ್ರ ಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ನಿಗದಿಪಡಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ

- Advertisement -
- Advertisement -

ಬೆಂಗಳೂರು: ರಾಜ್ಯದ ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ಏಕರೂಪದ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೆ ಏಕರೂಪದ ಟಿಕೆಟ್ ದರ ವಿಧಿಸಲಾಗಿದ್ದು, ಪ್ರತಿ‌ ಪ್ರದರ್ಶನದ ಟಿಕೆಟ್ ಬೆಲೆ ಮನರಂಜನಾ ತೆರಿಗೆ ಒಳಗೊಂಡಂತೆ 200 ರೂಪಾಯಿ ದರ ನಿಗದಿ ಪಡಿಸಲಾಗಿದೆ.

ಕರ್ನಾಟಕ ಸಿನಿಮಾಗಳ ನಿಯಂತ್ರಣ ಕಾಯ್ದೆಯಡಿ ರಾಜ್ಯ ಸರ್ಕಾರ ಈ ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಏಕರೂಪ ಟಿಕೆಟ್ ದರ ನಿಗದಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಹೇಳಿಕೆ ನೀಡಿತ್ತು.

ಈ ಹಿಂದೆ 2017ರಲ್ಲೇ ರಾಜ್ಯ ಸರ್ಕಾರ ಏಕರೂಪದ ಟಿಕೆಟ್ ದರ ಆದೇಶ ಹೊರಡಿಸಿತ್ತು. ಆದರೆ ಹೈಕೋರ್ಟ್ ತಡೆ ನೀಡಿದ್ದ ಕಾರಣ ಆದೇಶವನ್ನು ಸರ್ಕಾರ ಹಿಂತೆಗೆದುಕೊಂಡಿತ್ತು.

- Advertisement -

Latest News

error: Content is protected !!