- Advertisement -
![]()
- Advertisement -
ಉಡುಪಿ; ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿ ರೋಗಿ ಸಾವನ್ನಪ್ಪಿರುವ ಘಟನೆ ಮಣಿಪಾಲದ ಎಂಜಿಎಂ ಕಾಲೇಜಿನ ಎದುರು ಶನಿವಾರ ನಡೆದಿದೆ.
ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕಾಲೇಜಿನ ಬಳಿ ರಸ್ತೆ ಡಿವೈಡರ್ ಬಳಿ ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆದಿದೆ ಅಪಘಾತದ ನಂತರ, ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
- Advertisement -


