Sunday, June 7, 2026
Homeಅಪರಾಧಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಲೈಂಗಿಕ ಕಿರುಕುಳ; ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

ಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಲೈಂಗಿಕ ಕಿರುಕುಳ; ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

- Advertisement -
- Advertisement -

ಮಂಗಳೂರು: ಅಪ್ರಾಪ್ತ ಬಾಲಕಿಯೋರ್ವಳನ್ನ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎನ್ನಲಾಗಿದೆ.

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರು ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!