- Advertisement -
![]()
- Advertisement -
ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತಾರ್ಹವಾಗಿದ್ದು, ಎಸ್‌ಐಟಿ ತನಿಖೆಯು ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ನಡೆಯಬೇಕು. ಅದರ ಹೊರತಾಗಿ ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ʻಧರ್ಮಸ್ಥಳದ ಬಗ್ಗೆ ಸ್ಥಳೀಯರಿಗೆ ಹಾಗೂ ಅಲ್ಲಿ ಕೆಲಸ ಮಾಡಿರುವ ಪೊಲೀಸರಿಗೆ ಗೊತ್ತಿದ್ದು, ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.
- Advertisement -


