- Advertisement -
![]()
- Advertisement -
ವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಚಲನಚಿತ್ರ ನಟ ದರ್ಶನ್ ತೂಗುದೀಪ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ.2024ರ ಡಿಸೆಂಬರ್ ನಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ನಾಳೆ ಸುಪ್ರೀಂ ಕೋರ್ಟ್ ಮೇಲ್ಮನವಿಯ ಅಂತಿಮ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿ ಪರ್ದಿವಾಲ ಮತ್ತು ನ್ಯಾಯಮೂರ್ತಿ ಮಹದೇವನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ದರ್ಶನ್ ಪರ ವಕೀಲ ಕಪಿಲ್ ಸಿಬಲ್ ನಾಳೆ ವಾದ ಮಂಡನೆ ಮಾಡಲಿದ್ದಾರೆ.
ಮೇಲ್ಮನವಿ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದಿಂದ ವಾದ ಮಂಡನೆ ಪೂರ್ಣವಾಗಿದ್ದು, ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದರು.
- Advertisement -


