Thursday, June 4, 2026
Homeತಾಜಾ ಸುದ್ದಿಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ

ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ

- Advertisement -
- Advertisement -

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಸಭೆಯ ಅಧ್ಯಕ್ಷರೂ ಆಗಿರುವ ಜಗದೀಪ್ ಧನಕರ್ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇಂದಿನಿಂದ ಆರಂಭವಾಗಿದ್ದ ರಾಜ್ಯಸಭೆಯ ಮುಂಗಾರು ಅಧಿವೇಶನದಲ್ಲಿ ಕಾರ್ಯ ನಿರ್ವಹಿಸಿದ್ದ ಧನಕರ್ ಮೊದಲ ದಿನದ ಕಲಾಪದ ಬಳಿಕ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆಗೆ ಅನಾರೋಗ್ಯದ ಕಾರಣ ನೀಡಿರುವ ಜಗದೀಪ್ ಧನಕರ್, ತಮ್ಮ ರಾಜೀನಾಮೆ ಪತ್ರದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

74 ವರ್ಷ ವಯಸ್ಸಿನ ಧನಕರ್ 2022ರ ಆಗಸ್ಟ್ 11 ರಂದು ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು.

- Advertisement -

Latest News

error: Content is protected !!