Thursday, June 4, 2026
Homeಕರಾವಳಿಸೆ. 22 ರಿಂದ ಅ. 7 ರವರೆಗೆ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಸೆ. 22 ರಿಂದ ಅ. 7 ರವರೆಗೆ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

- Advertisement -
- Advertisement -

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು,‌ ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಯಲಿದೆ.

ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಯಲಿದ್ದು, ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಈ ಹಿಂದೆ ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ ಮ್ಯಾನ್ಯುಯಲ್ ಆಗಿ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ನಡೆಸಲಾಗಿದ್ದು, ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಯಲಿದೆ.

ಇದೇ ವೇಳೆ, ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದು, ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತ ಮಟ್ಟದ ಸಮಿತಿ ರಚಿಸಲು ತಿರ್ಮಾನ ಮಾಡಲಾಗಿದೆ.

ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದ್ದು, ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

- Advertisement -

Latest News

error: Content is protected !!