Saturday, June 6, 2026
Homeಕರಾವಳಿಮಂಗಳೂರುದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ; ಗಣಿ ಇಲಾಖೆ...

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ; ಗಣಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆ ತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಬದಲಾವಣೆಗಳನ್ನು ತರುವ ಕುರಿತಂತೆ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದರು.

ವಾಣಿಜ್ಯ ಉದ್ದೇಶವಲ್ಲದ ಕೆಂಪು ಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆ ಜಾರಿಯಾಗಬೇಕು. ಪರವಾನಿಗೆ ಪಡೆಯಲು ಏಕಗವಾಕ್ಷಿ ಯೋಜನೆ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಮಯ ಮಿತಿಯಲ್ಲಿ ಪರವಾನಿಗೆಗಳನ್ನು ಕೊಡುವ ಕಾರ್ಯಗತಿ ಜಾರಿಗೆ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕೆಂಪು ಕಲ್ಲು ಉತ್ಪಾದಕರೊಂದಿಗೆ ಚರ್ಚೆ ನಡೆಸಿ ವಾರದೊಳಗೆ ಹೊಸ ನೀತಿ ಜಾರಿಗೊಳಿಸುವತ್ತ ಎಸ್ ಒಪಿ ಸಿದ್ಧಪಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಇದೇ ವೇಳೆ, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 3 ಮೀಟರ್ ಮಾತ್ರ ಆಳಕ್ಕೆ ಡ್ರಿಲ್ ಮಾಡಲು ಅವಕಾಶವಿದ್ದು, ಇದನ್ನು 6 ಮೀಟರ್ ಗೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ ನೀಡಿದರು.ಅಲ್ಲದೇ, ರಾಯಲ್ಟಿಯನ್ನು ಕಡಿಮೆಗೊಳಿಸಿ ನಿಯಮ ಬದ್ಧವಾಗಿ ಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವಂತೆಯೂ ಅಧಿಕಾರಿಗಳಿಗೆ ಸ್ಪೀಕರ್ ಸೂಚನೆ ನೀಡಿದರು.‌

- Advertisement -

Latest News

error: Content is protected !!